Quantcast
Channel: VijayKarnataka
Viewing all articles
Browse latest Browse all 6795

ನೀರಿಗಾಗಿ ದರ್ಶನ್ ಟ್ವೀಟ್

$
0
0

- ಪದ್ಮಾ ಶಿವಮೊಗ್ಗ

ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ದರ್ಶನ್ ಟ್ವಿಟರ್‌ನಲ್ಲಿ ಕೇಳಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ರೈತರು ಹೋರಾಟವನ್ನು ಹಮ್ಮಿಕೊಂಡಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಜಲ ದಿನವನ್ನು ಆಚರಿಸಲಾಗಿದೆ. ಈ ಸಂದರ್ಭದಲ್ಲಿ ದರ್ಶನ್ ಟ್ವೀಟ್ ಮಾಡಿದ್ದಾರೆ. ರಾಜ್ಯದ ಕಳಸಾ ಬಂಡೂರಿ ವಿಷಯದ ಬಗ್ಗೆ ಗಮನ ಸೆಳೆದು ಆದಷ್ಟು ಬೇಗ ಸಮಸ್ಯೆ ಪರಿಹರಿಸಬೇಕೆಂದು ಮನವಿ ಮಾಡಿದ್ದಾರೆ.

'ನರೇಂದ್ರ ಮೋದಿ ಸರ್ ಕಳಸಾ ಬಂಡೂರಿ ವಿವಾದವನ್ನು ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಬಗೆಹರಿಸಿ. ಕರ್ನಾಟಕದ ಜನರ ಪರವಾಗಿ ಇದು ನನ್ನ ಹಂಬಲ್ ರಿಕ್ವೆಸ್ಟ್. ಪ್ಲೀಸ್ ಇದಕ್ಕೆ ಮೊದಲ ಪ್ರಾಶಸ್ತ್ಯ ನೀಡಿ ಪರಿಗಣಿಸಿ' ಎಂದಿದ್ದಾರೆ ದರ್ಶನ್. ತಮ್ಮ ಎರಡನೇ ಟ್ವಿಟರ್ ಸಂದೇಶದಲ್ಲಿ ಕೂಡ ಮತ್ತೆ ಮೋದಿಯವರನ್ನು ಒತ್ತಾಯಿಸಿದ್ದಾರೆ.

'ನೀರು ಎನ್ನುವುದು ಜೀವಜಲ. ಮೋದಿ ಮಧ್ಯಪ್ರವೇಶಿಸಿದರೆ ಇದಕ್ಕೆ ಹೆಚ್ಚು ಸಮಯ ಬೇಕಾಗುವುದಿಲ್ಲ. ಪ್ಲೀಸ್ ಡು ದಿ ನೀಡ್‌ಫುಲ್' ಎಂದಿದ್ದಾರೆ ಈ ನಟ. ಇನ್ನು ರಾಗಿಣಿ ಕೂಡಾ ಟ್ವಿಟರ್‌ನಲ್ಲಿ ಶೇರ್ ಮಾಡಿ, ತಮ್ಮ ಬೆಂಬಲ ಸೂಚಿಸಿದ್ದಾರೆ.

ಕಳೆದ ವರ್ಷ ಸ್ಯಾಂಡಲ್‌ವುಡ್ ಕಲಾವಿದರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಬೃಹತ್ ರ‌್ಯಾಲಿ ನಡೆಸಿದ್ದರು. ಶಿವರಾಜ್‌ಕುಮಾರ್, ಉಪೇಂದ್ರ, ದರ್ಶನ್, ರವಿಚಂದ್ರನ್, ದುನಿಯಾ ವಿಜಿ, ಜಯಮಾಲಾ, ಪುನೀತ್ ರಾಜ್‌ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರೆಲ್ಲರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ಮಾಡಿದ್ದರು. ಇಷ್ಟಾಗಿಯೂ ಇಲ್ಲಿಯವರೆಗೆ ಸಮಸ್ಯೆಗೆ ಕೇಂದ್ರ ಸರಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ದರ್ಶನ್ ಟ್ವೀಟ್ ಗಮನ ಸೆಳೆದಿದೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>