Quantcast
Channel: VijayKarnataka
Viewing all articles
Browse latest Browse all 6795

ನಟ ದಿಲೀಪ್‌ ಕುಮಾರ್‌ ಆಸ್ಪತ್ರೆಗೆ ದಾಖಲು

$
0
0

ಮುಂಬಯಿ: ಬಾಲಿವುಡ್‌ನ ಹಿರಿಯ ನಟ ದಿಲೀಪ್‌ ಕುಮಾರ್‌ ಅವರನ್ನು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

'ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಶುಕ್ರವಾರ ಮಧ್ಯರಾತ್ರಿ 2 ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಐಸಿಯುನಲ್ಲಿ ಇಲ್ಲ. ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ,'ಎಂದು ಡಾ. ಜಲೀಲ್‌ ಪರ್ಕರ್‌ ಹೇಳಿದ್ದಾರೆ.

ಚಿತ್ರರಂಗಕ್ಕೆ ಬಂದ ನಂತರ ದಿಲೀಪ್‌ ಕುಮಾರ್‌ ಎಂದು ಹೆಸರು ಬದಲಿಸಿಕೊಂಡಿದ್ದ 93 ವರ್ಷದ ಹಿರಿಯ ನಟನ ಮೂಲ ಹೆಸರು ಮೊಹಮ್ಮದ್‌ ಯೂಸುಫ್‌ ಖಾನ್‌. 6 ದಶಕಗಳ ಚಿತ್ರ ಜೀವನದಲ್ಲಿ 'ಮಧುಮತಿ', 'ದೇವದಾಸ್‌', 'ಮೊಘಲ್‌ ಏ ಆಜಂ', 'ಗಂಗಾ ಜಮುನಾ', 'ರಾಮ್‌ ಔರ್ ಶ್ಯಾಮ್‌', 'ಕರ್ಮ' ಮುಂತಾದ ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿದ್ದಾರೆ.

'ಅಂದಾಜ್‌, 'ಬಾಬುಲ್', 'ಮೇಲಾ', 'ದೀದಾರ್‌', 'ಜೋಗನ್‌' ಮುಂತಾದ ದುರಂತ ಚಿತ್ರಗಳ ನಾಯಕನಾಗಿ ಯಶಸ್ಸು ಕಂಡ ನಟನಿಗೆ 'ಟ್ರ್ಯಾಜಿಡಿ ಕಿಂಗ್‌' ಎಂಬ ಬಿರುದಾವಳಿಯೂ ಇದೆ. 1998ರಲ್ಲಿ ತೆರೆಕಂಡ ಕಿಲಾ ಚಿತ್ರದಲ್ಲಿ ಅಂತಿಮವಾಗಿ ತೆರೆಯ ಮೇಲೆ ಕಾಣಿಸಿಕೊಂಡಿದ್ದರು.

ದಿಲೀಪ್‌ ಕುಮಾರ್‌ಗೆ 2015ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ, ಅದಕ್ಕೂ ಮೊದಲು 1991ರಲ್ಲಿ ಪದ್ಮಭೂಷಣ, 1994ರಲ್ಲಿ ದಾದಾ ಸಾಹೇಬ್‌ ಫಾಲ್ಕೆಪ್ರಶಸ್ತಿ ನೀಡಿ ಗೌರವಿಸಲಾಗಿದೆ.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>