Quantcast
Channel: VijayKarnataka
Viewing all articles
Browse latest Browse all 6795

ಗುರು ಚಿತ್ರದಲ್ಲಿ ಮಾಲಾಶ್ರೀ

$
0
0

ಗುರು ದೇಶಪಾಂಡೆ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಜಾನ್‌ ಜಾನಿ ಜನಾರ್ಧನ್‌' ಚಿತ್ರಕ್ಕಾಗಿ ಮಾಲಾಶ್ರೀ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ಇವರಿಗೆ ವಿಶೇಷ ಪಾತ್ರ ನೀಡಿದ್ದಾರಂತೆ ನಿರ್ದೇಶಕರು. ಪಾತ್ರದ ಬಗ್ಗೆ ಯಾವುದೇ ಸುಳಿವು ಬಿಟ್ಟು ಕೊಡದ ನಿರ್ದೇಶಕರು, ಅದೊಂದು ವಿಭಿನ್ನ ಪಾತ್ರವೆಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಚಿತ್ರಕ್ಕೆ ಮೂವರು ನಾಯಕರು. ಅಜಯ್‌ ರಾವ್‌, ಲೂಸ್‌ಮಾದ ಯೋಗಿ ಮತ್ತು ಮದರಂಗಿ ಕೃಷ್ಣ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಮೂವರು ಹುಡುಗರ ಕುರಿತಾದ ಚಿತ್ರದಲ್ಲಿ ಮಾಲಾಶ್ರೀ ಅವರ ಪಾತ್ರ ಏನಿರಬಹುದು ಅನ್ನುವ ಚರ್ಚೆ ಈಗಾಗಲೇ ಶುರುವಾಗಿದೆ. ಅಂದಹಾಗೆ ಈ ಚಿತ್ರವು ಮಲೆಯಾಳಂನ 'ಅಮರ್‌ ಅಕ್ಬರ್‌ ಆಂಥೋನಿ' ಚಿತ್ರದ ರೀಮೇಕ್‌ ಅಂತೆ. ಅದರಲ್ಲಿ ಕೆಲವು ದೃಶ್ಯಗಳನ್ನು ಬದಲಾಯಿಸಿಕೊಂಡು ಕನ್ನಡಕ್ಕೆ ತರುತ್ತಿದ್ದಾರೆ ಗುರು ದೇಶಪಾಂಡೆ. ಈ ನಿರ್ದೇಶಕರ ಹಿಂದಿನ ಚಿತ್ರ ರಾಜಾಹುಲಿ, ಬಾಕ್ಸ್‌ ಆಫೀಸ್‌ನಲ್ಲಿ ಸಖತ್‌ ಸದ್ದು ಮಾಡಿತ್ತು. ಹೀಗಾಗಿ ಅವರ ಹೊಸ ಸಿನಿಮಾ ಬಗ್ಗೆಯೂ ನಿರೀಕ್ಷೆ ಇದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>