ಹೊಸದಿಲ್ಲಿ: ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಕೆ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಸರಕಾರದಿಂದ ಈ ಅನುಮೋದನೆಯಿಂದ ಕೇಂದ್ರ ಸರಕಾರಿ ಸೇವೆಯಲ್ಲಿರುವ ವೈದ್ಯರ ನಿವೃತ್ತಿ ವಯಸ್ಸು 60ರಿಂದ 65ಕ್ಕೆ ಏರಿಕೆ ಆದಂತಾಗಿದೆ. ದೇಶಾದ್ಯಂತ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ವೈದ್ಯರ ಕೊರತೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅನುಭವಿ ವೈದ್ಯರ ಸೇವೆ ಮುಂದುವರಿಸಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಸಹರಾನ್‌ಪುರ್ ರ‍್ಯಾಲಿಯಲ್ಲಿ ಘೋಷಿಸಿದ್ದರು.
↧
ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಕೆ; ಕೇಂದ್ರ ಒಪ್ಪಿಗೆ
↧