Quantcast
Channel: VijayKarnataka
Viewing all articles
Browse latest Browse all 6795

ಮುಂಗಾರಿಗೆ ಬಿತ್ತನೆಬೀಜ, ರಸಗೊಬ್ಬರ ಅಭಾವ ಇಲ್ಲ

$
0
0

ನಕಲಿ ಬೀಜ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೊಸ ಕಾಯ್ದೆ

ವಿಕ ಫೋನ್‌ಇನ್‌ನಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಅಭಯ

ಬೆಂಗಳೂರು: ಮುಂಗಾರು ಹಂಗಾಮಿಗಾಗಿ ರಾಜ್ಯದಲ್ಲಿ ಬಿತ್ತನೆಬೀಜ, ರಸಗೊಬ್ಬರ, ಕೃಷಿ ಸಲಕರಣೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಒದಗಿಸಲು ರಾಜ್ಯ ಸರಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

'ವಿಜಯ ಕರ್ನಾಟಕ'ದ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ 'ನೇರ ಫೋನ್‌ ಇನ್‌' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಅನ್ನದಾತರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸಿ ನೆರವಿನ ಅಭಯಹಸ್ತ ಚಾಚಿದರು.

ಕಳೆದ ವರ್ಷ ರಾಜ್ಯವನ್ನು ತೀವ್ರವಾಗಿ ಕಾಡಿದ ಬರಗಾಲದಿಂದ ರೈತರು ಬೆಳೆ ಕಳೆದುಕೊಂಡು ತೀವ್ರ ಸಂಕಷ್ಟ ಅನುಭವಿಸಿದರು. ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಈ ವರ್ಷ ಮುಂಗಾರು ಭರ್ಜರಿ ಆರಂಭದೊಂದಿಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದರಿಂದ ರೈತರ ಮೊಗದಲ್ಲಿ ಹೊಸ ಆಶಾಭಾವನೆ ಮೂಡಿದೆ. ಇಂತಹ ಸನ್ನಿವೇಶದಲ್ಲಿ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ವಿಕ ಈ ಕಾರ‍್ಯಕ್ರಮ ಆಯೋಜಿಸಿತ್ತು.

''ರಾಜ್ಯದಲ್ಲಿ ಈ ಬಾರಿ 9.5 ಲಕ್ಷ ಕ್ವಿಂಟಲ್‌ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ. ಈ ಪೈಕಿ 8 ಲಕ್ಷ ಕ್ವಿಂಟಲ್‌ ಖರೀದಿಗೆ ಆರ್ಡರ್‌ ಮಾಡಲಾಗಿದ್ದು, ಈಗಾಗಲೇ 5.5 ಲಕ್ಷ ಕ್ವಿಂಟಲ್‌ ಬೀಜ ದಾಸ್ತಾನು ಮಾಡಿ ರೈತರಿಗೆ ಪೂರೈಸಲಾಗಿದೆ. ಇದಲ್ಲದೆ, ಖಾಸಗಿ ಕಂಪನಿಗಳ ಮುಖಾಂತರ 1.5 ಲಕ್ಷ ಕ್ವಿಂಟಾಲ್‌ ಬೀಜ ಪೂರೈಕೆಯಾಗಲಿದೆ,'' ಎಂದು ಸಚಿವರು ವಿವರಿಸಿದರು.

ನಕಲಿ ಹತ್ತಿ ಬೀಜ ಹಾವಳಿ ತಡೆಗೆ ಹೊಸ ಕಾಯ್ದೆ

''ಕೇಂದ್ರ ಸರಕಾರದ ಬಿತ್ತನೆ ಬೀಜ ಕಾಯ್ದೆ ಓಬಿರಾಯನ ಕಾಲದ್ದು. ಈ ಕಾಯ್ದೆ ಅನ್ವಯ ನಕಲಿ ಬಿತ್ತನೆ ಬೀಜ ಪೂರೈಕೆ ಮಾಡಿದ ಕಂಪೆನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿದರೂ ಅವು ತಡೆಯಾಜ್ಞೆ ತರಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ನಕಲಿ ಹತ್ತಿ ಬಿತ್ತನೆ ಬೀಜಗಳ ಹಾವಳಿ ತಡೆಗೆ ರಾಜ್ಯ ಸರಕಾರ ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತರಲಿದೆ. ಹೊಸ ಕಾಯಿದೆಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಸೂಚಿಸಿ, ರಾಜ್ಯಪಾಲರ ಸಹಿ ನಂತರ ಅಂಕಿತಕ್ಕಾಗಿ ರಾಷ್ಟ್ರಪತಿಗಳಿಗೆ ಕಳಿಸಲಾಗಿದೆ. ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ,'' ಎಂದು ಸಚಿವರು ಹೇಳಿದರು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶಾಕಿಂಗ್ ನ್ಯೂಸ್: ಶಾಲೆಯಲ್ಲೇ ಸೆಕ್ಸ್ ವಿಡಿಯೋ ತೋರಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>