ಮಂಡ್ಯ: ಕಾವೇರಿ ನೀರಿಗಾಗಿ ಆಗ್ರಹಿಸಿ ಕರ್ನಾಟಕ ಬಂದ್ ನಡೆಯುತ್ತಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ. ಸಾವಿರಾರು ರೈತರು ಕೆಆರ್‌ಎಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಇಬ್ಬರು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ವರದಿಯಾಗಿದೆ.
ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸಲು ಘಟನಾ ಸ್ಥಳದಲ್ಲಿ ಅಶ್ರುವಾಯು ಸಿಡಿಸಿದ್ದಾರೆ.
ಒಬ್ಬ ರೈತ ವಿಷ ಸೇವಿಸಿದರೆ, ನಾಲ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನದಿಗೆ ಬಿದ್ದವರಲ್ಲಿ ಮೂವರನ್ನು ರಕ್ಷಿಸಲಾಗಿದೆ.
ಕೆಆರ್‌ಎಸ್ ಸಮೀಪ ಪ್ರತಿಭಟಿಸುತ್ತಿದ್ದವರಲ್ಲಿ ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಿದ್ದಲಿಂಗು ಅಸ್ವಸ್ಥರಾಗಿದ್ದಾರೆ.
↧
ಬಂದ್: ಮಂಡ್ಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತರು
↧