ಪ್ರಾಧಿಕಾರವಾಗಿ ಬದಲಾದ ಪ್ರತಿಷ್ಠಾನ / ಅಭಿವೃದ್ಧಿ ಸಲಹೆಗೆ ತಜ್ಞರ ಸಮಿತಿ ಯುವ ಸಬಲೀಕರಣ ಕೇಂದ್ರವಾಗಿ ಶೌರ್ಯ ಅಕಾಡೆಮಿ ಸ್ಥಾಪಿಸಲು, ರಾಯಣ್ಣ ಹೆಸರಿನಲ್ಲಿ ಅಸ್ತಿತ್ವಕ್ಕ್ಕೆ ಬಂದಿರುವ ಪ್ರತಿಷ್ಠಾನವನ್ನು ಪ್ರಾಧಿಕಾರವಾಗಿ ಬದಲಿಸಲು ಹಾಗೂ ರಾಯಣ್ಣ ಅವರನ್ನು ನೇಣಿಗೇರಿಸಿದ ನಂದಗಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಯಣ್ಣ ಪ್ರತಿಷ್ಠಾನದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ರಾಯಣ್ಣ ಹೆಸರಿನಲ್ಲಿ ಶೌರ್ಯ ಅಕಾಡೆಮಿ ಸ್ಥಾಪಿಸಿ ಯುವ ಜನರಲ್ಲಿ ದೇಶಪ್ರೇಮ ಮೂಢಿಸುವ ಕೇಂದ್ರವಾಗಿ ರೂಪಿಸಲು ನಿರ್ಧರಿಸಲಾಗಿದೆ. ಈ ಉದ್ದೇಶಕ್ಕೆ 100 ಎಕರೆ ಸ್ವಾಧೀನ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ರಾಯಣ್ಣ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಈ ಅಕಾಡೆಮಿ ಅಸ್ತಿತ್ವಕ್ಕೆ ಬರಲಿದ್ದು, ರಾಯಣ್ಣ ಅವರನ್ನು ನೇಣುಗಂಬಕ್ಕೆ ಏರಿಸಿದ ನಂದಗಡದ ಸಮಾಧಿ ಸ್ಥಳವನ್ನೂ ಸಮಗ್ರವಾಗಿ ಅಭಿವೃದ್ಧಿಪಡಿಸಲು ಸಭೆ ತೀರ್ಮಾನಿಸಿತು. ತಜ್ಞರ ಸಮಿತಿ ರಚನೆ: ರಾಯಣ್ಣ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿ ನಿರ್ವಹಿಸಲು ಹಾಗೂ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಅಭಿವೃದ್ಧಿಪಡಿಸಲು ಇತಿಹಾಸ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿ ರಚನೆ ಮಾಡಬೇಕು. ತಜ್ಞರ ಸಮಿತಿಯ ಸಲಹೆ, ಮಾರ್ಗದರ್ಶನ ಪಡೆದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದರು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಮೇಲ್ಮನೆ ಸದಸ್ಯ ಎಚ್.ಎಂ.ರೇವಣ್ಣ, ಬೆಳಗಾವಿ ಜಿಲ್ಲಾಧಿಕಾರಿ ಜಯರಾಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ದಯಾನಂದ್ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು. ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆ *ನವೆಂಬರ್ ಅಂತ್ಯದೊಳಗೆ ಪ್ರಾಧಿಕಾರದ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ *ಪ್ರಾಧಿಕಾರಕ್ಕೆ ಪ್ರತ್ಯೇಕ ಆಯುಕ್ತರು ಹಾಗೂ ಸಿಬ್ಬಂದಿ ನೇಮಕಕ್ಕೆ ಕ್ರಮ *ಬೆಳಗಾವಿ ಡಿಸಿ ಕಚೇರಿಯಲ್ಲಿ ಪ್ರಾಧಿಕಾರದ ಕಚೇರಿಗೆ ಸ್ಥಳಾವಕಾಶ *ರಾಯಣ್ಣ ಹುಟ್ಟೂರಿನ ಅಭಿವೃದ್ಧಿಗಳ ಬಗ್ಗೆ ತಜ್ಞರ ಅಭಿಪ್ರಾಯ ಸಂಗ್ರಹ *ಬಜೆಟ್‌ನಲ್ಲಿ ಮೀಸಲಿಟ್ಟ ಅನುದಾನ ಬಳಕೆ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಮೂಲಕ ಅಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಲು ಹಾಗೂ ಈ ಉದ್ದೇಶಕ್ಕೆ ಮಾರ್ಗದರ್ಶನ ಪಡೆಯಲು ತಜ್ಞರ ಸಮಿತಿ ರಚನೆಗೆ ನಿರ್ಧರಿಸಲಾಗಿದೆ. -ಎಚ್.ಆಂಜನೇಯ, ಸಮಾಜ ಕಲ್ಯಾಣ ಸಚಿವ
ಬೆಂಗಳೂರು: 'ರಾಯಣ್ಣ ಬ್ರಿಗೇಡ್' ಮೂಲಕ ಅಹಿಂದ ಬುಟ್ಟಿಗೆ ಕೈಹಾಕಲು ಹೊರಟಿರುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಪ್ರಯತ್ನಕ್ಕೆ ಟಾಂಗ್ ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟೂರಿನಲ್ಲಿ 'ಶೌರ್ಯ ಅಕಾಡೆಮಿ' ಸ್ಥಾಪನೆಗೆ ತೀರ್ಮಾನಿಸಿದ್ದಾರೆ.
-----
↧
ರಾಯಣ್ಣ ಶೌರ್ಯ ಅಕಾಡೆಮಿ ಸ್ಥಾಪನೆಗೆ ಸರಕಾರ ತೀರ್ಮಾನ
↧