Quantcast
Channel: VijayKarnataka
Viewing all articles
Browse latest Browse all 6795

ವಲಸಿಗರಿಗೆ ಮಣೆ ಹಾಕಿದ ಜೆಡಿಎಸ್

$
0
0

ಬೆಂಗಳೂರು: ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದ ಜೆಡಿಎಸ್ ನಾಯಕರು ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೊನೆಗಳಿಗೆಯಲ್ಲಿ ಕಾಂಗ್ರೆಸ್‌ನಿಂದ ವಲಸೆ ಬಂದವರಿಗೆ ಮಣೆ ಹಾಕಿದ್ದಾರೆ.

ಮೂಲತಃ ಕಾಂಗ್ರೆಸ್‌ನಲ್ಲಿದ್ದವರಿಗೆ ಮೂರು ಕ್ಷೇತ್ರಗಳಲ್ಲಿ ಬಿ ಾರಂ ನೀಡಲು ನಿರ್ಧರಿಸಿರುವುದರಿಂದಾಗಿ ಪಕ್ಷದ ವಲಯದಲ್ಲಿ ಸಹಜವಾಗಿಯೇ ಆಕ್ಷೇಪ ಕೇಳಿಬಂದಿದೆ. ಅದರಲ್ಲಿ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಲ್ಲಿ ಇಸ್ಮಾಯಿಲ್ ಷರೀಫ್‌ ಎಂಬುವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹೆಚ್ಚು ಅಸಮಾಧಾನಕ್ಕೆ ಕಾರಣವಾಗಿದೆ.

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಹೆಬ್ಬಾಳ ಕ್ಷೇತ್ರದಲ್ಲಿ ಇಸ್ಮಾಯಿಲ್ ಷರ್ೀ, ಬೀದರ್‌ನಲ್ಲಿ ಡಾ. ಅಯಾಜ್ ಖಾನ್ ಅವರನ್ನು ಕಣಕ್ಕೆ ಇಳಿಸುವುದಾಗಿ ಪ್ರಕಟಿಸಿದರು.

22 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದ ಮಹಮದ್ ಅಯಾಜ್ ಖಾನ್ ಅವರು ಬೀದರ್ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ಬೇಡ ಎಂದು ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ, ಒತ್ತಾಯದ ಮೇರೆಗೆ ಚುನಾವಣೆಗೆ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇವೆ ಎಂದು ದೇವೇಗೌಡರು ಹೇಳಿದರು.

ಬೀದರ್ ಕ್ಷೇತ್ರದ ಅಭ್ಯರ್ಥಿ ಅಯಾಜ್ ಖಾನ್ ಮಾತನಾಡಿ ''ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಬಳಸಿಕೊಳ್ಳುತ್ತಾರೆ ವಿನಃ ಮುಸ್ಲಿಂ ಸಮುದಾಯದವರನ್ನು ನಾಯಕರಾಗಿ ಬೆಳೆಯಲು ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿರೋ ಧೋರಣೆ ಖಂಡಿಸಿ, ಜೆಡಿಎಸ್ ಸೇರಿದ್ದೇನೆ. ಜೆಡಿಎಸ್ ಮಾತ್ರ ಸರ್ವಧರ್ಮಗಳ ಪಕ್ಷ. ಬೀದರ್ ಉತ್ತರ ಕ್ಷೇತ್ರದ ಮತದಾರರು ತಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ,'' ಎಂದರು.

ಮೂವರು ವಲಸಿಗರು

ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಸ್ಪರ‌್ಸುವ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ದೇವದುರ್ಗದ ಅಭ್ಯರ್ಥಿಯಾಗಿರುವ ಕರೆಮ್ಮ ಅವರು ಕಾಂಗ್ರೆಸ್ ಪಕ್ಷದಿಂದಲೇ ತಾಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ, ದೇವದುರ್ಗ ತಾಪಂ ಅಧ್ಯಕ್ಷರಾಗಿದ್ದರು. ಮೂರು ತಿಂಗಳ ಹಿಂದಷ್ಟೇ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು.

ದೇವೇಗೌಡರೇ ಹೇಳಿದಂತೆ ಬೀದರ್‌ನ ಅಭ್ಯರ್ಥಿ ಅಯಾಜ್ ಖಾನ್, 22 ವರ್ಷ ಕಾಂಗ್ರೆಸ್‌ನಲ್ಲಿದ್ದವರು. ಹೆಬ್ಬಾಳ ಅಭ್ಯರ್ಥಿ ಇಸ್ಮಾಯಿಲ್ ಷರೀಫ್ ಕಾಂಗ್ರೆಸ್‌ನವರಾಗಿದ್ದು, 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸರ್ವಜ್ಞನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಮಂಗಳವಾರ ಮಧ್ಯಾಹ್ನವಷ್ಟೇ ಅವರು ಜೆಡಿಎಸ್ ಸೇರಿದ್ದಾರೆ.
ಯಾರಿಗೆ ಟಿಕೆಟ್?

ದೇವದುರ್ಗ - ಕರೆಮ್ಮ

ಬೀದರ್ - ಅಯಾಜ್ ಖಾನ್

ಹೆಬ್ಬಾಳ - ಇಸ್ಮಾಯಿಲ್ ಷರೀಫ್


Viewing all articles
Browse latest Browse all 6795

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>